Home ಕರಾವಳಿ ಬಂಟ್ವಾಳ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ; ದೂರು ದಾಖಲು

ಬಂಟ್ವಾಳ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ; ದೂರು ದಾಖಲು

0

ಬಂಟ್ವಾಳ: RSS ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಹೆಸರಲ್ಲಿ ನಕಲಿ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಪೋಸ್ಟ್ ಮಾಡಿದ  ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಗೆ ದೂರು ನೀಡಲಾಗಿದೆ.


ಕಲ್ಲಡ್ಕ ಡಾ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ, ಅಥವ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು ಈ ಬಗ್ಗೆ ಪೋಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಪೋಲೀಸರು ‌ನಿಗಾವಹಿಸುವಂತೆಯೂ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here