Home ಪ್ರಖರ ವಿಶೇಷ ಆಗಸ್ಟ್ 6ರ೦ದು ಮಂಗಳೂರು ಜಂಕ್ಷನ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

ಆಗಸ್ಟ್ 6ರ೦ದು ಮಂಗಳೂರು ಜಂಕ್ಷನ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

0

ಮ೦ಗಳೂರು: ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರ೦ದು ಶಿಲಾನ್ಯಾಸ ನೆರವೇರಲಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ರವಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದು ಮಂಗಳೂರು ಜಂಕ್ಷನ್ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here