ಉಡುಪಿ : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಧ್ಯಾರ್ಥಿನಿಯ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಸಂತ್ರಸ್ತೆ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದರು.
ಜುಲೈ 18ರಂದು ಕಾಲೇಜಿನಲ್ಲಿ ನಡೆದ ಘಟನೆಯನ್ನು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು ಮೊಬೈಲ್‌ನಿಂದ ಡಿಲೀಟ್ ಆಗಿದೆ ಎನ್ನಲಾದ ವಿಡಿಯೊವನ್ನು ಮರು ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿ ಮತ್ತೊಂದು ವಿಡಿಯೊ ಲಭ್ಯವಾಗಿದೆ ಎಂಬ ಮಾಹಿತಿ ಶರಣ್ ಪಂಪ್‌ವೆಲ್ ಅವರಿಗೆ ಎಲ್ಲಿಂದ ಲಭ್ಯವಾಗಿದೆ, ಯಾರು ಮಾಹಿತಿ ಕೊಟ್ಟಿದ್ದಾರೆ ಗೊತ್ತಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೊ ಲಭ್ಯವಾಗಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ತಿಳಿಸಿದರು.