ಮಂಗಳೂರು:ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾದ ಸಂದೇಶವನ್ನು ಹಂಚಿಕೊಂಡ ಆರೋಪಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.