Home ಕರಾವಳಿ ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್ಐಟಿ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಕರಾವಳಿ ಭಾಗದ ಶಾಸಕರ ಮನವಿ

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್ಐಟಿ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಕರಾವಳಿ ಭಾಗದ ಶಾಸಕರ ಮನವಿ

0

ಮಂಗಳೂರು: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವರು,ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಮಂಗಳೂರು ಉತ್ತರ ಶಾಸಕ ಭರತ್‌ ಶಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಶಾಸಕ ಯಶ್ಪಲ್‌ ಸುವರ್ಣ, ಭೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, , ಕುಂದಾಪುರ ಶಾಸಕ ಕಿರಣ್‌ ಕೊಡ್ಗಿ, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳೆಪಾಡಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here