ಪುತ್ತೂರು: ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸಿನ ಮಾಸಿಕ ಸಭೆಯು ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಚುನಾವಣೆಯು ಹತ್ತಿರ ಬರುವ ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಒತ್ತು ಕೊಡುವುದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡಿಸುವ ಬಗ್ಗೆ ಹಾಗೂ ಇನ್ನು ಹಲವಾರು ವಿಷಯಗಳ ಬಗ್ಗೆ ಪ್ರಸ್ತಾಪಿಸಿದ ಎಂ ಬಿ ವಿಶ್ವನಾಥ ರೈ ಯವರು ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಕಾರ್ಯಕರ್ತರು ಈಗಲೇ ಶ್ರಮವಹಿಸಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು , ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು , ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕದ ಅದ್ಯಕ್ಷರು , ವಲಯ ಅದ್ಯಕ್ಷರು ಹಾಗು ಪಕ್ಷದ ಕಾರ್ಯಕರ್ತರು ಬಾಗವಹಿಸಿದ್ದರು.