ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಗೃಹಜ್ಯೋತಿ ಯೋಜನೆಯ ಅಧಿಕೃತ ಚಾಲನಾ ಕಾರ್ಯಕ್ರಮ ಆ.11 ರಂದು ಪುತ್ತೂರಿನಲ್ಲಿ ನಡೆಯಲಿದೆ.
ಪುತ್ತೂರಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮವನ್ಬು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರಡ. ಪುತ್ತೂರು ಶಾಸಕರಾದ ಅಶೋಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಈ ಕುರಿತ ಪೂರ್ವಭಾವಿ ಸಭೆಯು ಶಾಸಕರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಜೇಶ್ ಪುತ್ತೂರು ನಗರ ಸಹಾಯಕ ಇಂಜಿನಿಯರ್, ರಾಮಚಂದ್ರ ಕಾರ್ಯನಿರ್ವಾಹಕ ಇಂಜಿನಿಯರ್, ರಾಮಚಂದ್ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಪುತ್ತೂರು ಬ್ಲಾಕ್ ಅಧ್ಯಕ್ಷ ರಾದ ಎಂ ಬಿ ವಿಶ್ವನಾಥ ರೈ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್ ಉಪಸ್ಥಿತರಿದ್ದರು.