ಉಡುಪಿ: ಸಾಕಷ್ಟು ವಿವಾದಗಳಿಗೆ ಕಾರಣವಾಗಿದ್ದ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿ ಹೆಗಲಿಗೆ ವಹಿಸಿದೆ.
ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಿಂದ ಸಿಐಡಿ ಪೊಲೀಸರ ತಂಡ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.
ಸಿಐಡಿ ಡಿವೈ ಎಸ್ ಪಿ ಅಂಜುಮಾಲಾ ನಾಯಕ್ ಮತ್ತು ತಂಡ ನಗರದ ಬನ್ನಂಜೆಯಲ್ಲಿರುವ ಎಸ್ ಪಿ ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದೆ.ಇಂದೇ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರನ್ನು ಸಿಐಡಿ ಅಧಿಕಾರಿಗಳು ಭೇಟಿ ಸಾಧ್ಯತೆ ಎಂದು ತಿಳಿದು ಬಂದಿದೆ.