Home ಉಡುಪಿ ಉಡುಪಿ: ತಾಯಿ ಮಗಳು ನಾಪತ್ತೆ..!

ಉಡುಪಿ: ತಾಯಿ ಮಗಳು ನಾಪತ್ತೆ..!

0

ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


ಅಕ್ಷತಾ 5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಖುಷಿ 4 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here