Home ಕರಾವಳಿ ಮಂಗಳೂರು: ಲಾಕರ್‌ ನಲ್ಲಿದ್ದ ಚಿನ್ನಾಭರಣ ಕಳವುಗೈದ ಗಂಡ – ಹೆಂಡತಿಯಿಂದ ದೂರು..!

ಮಂಗಳೂರು: ಲಾಕರ್‌ ನಲ್ಲಿದ್ದ ಚಿನ್ನಾಭರಣ ಕಳವುಗೈದ ಗಂಡ – ಹೆಂಡತಿಯಿಂದ ದೂರು..!

0

ಮಂಗಳೂರು: ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧ ಪತ್ನಿಯು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.


ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಆರೋಪಿಗಳು ಎಂದು ಗುರುತಿಸಲಾಗಿದೆ. ಮಹಿಳೆಯ ಜೊತೆ ಒಟ್ಟು 75 ಪವನ್ ಚಿನ್ನವಿತ್ತು.ಆ ಚಿನ್ನವನ್ನು ಅವರು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲಾಟ್‌ನ ಕಪಾಟಿನಲ್ಲಿ ಭದ್ರವಾಗಿರಿಸಿದ್ದರು.ಈ ವಿಷಯ ಫಿರ್ಯಾದುದಾರರು ಮತ್ತು ಅವರ ಗಂಡನಾದ ಇಲಿಯಾಸ್‌ನಿಗೆ ಮಾತ್ರ ತಿಳಿದಿತ್ತು ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.

2023 ರ ಏಪ್ರಿಲ್‌ ತಿಂಗಳಿನಲ್ಲಿ ಪಿರ್ಯಾದಿದಾರರು ಮತ್ತು ಅವರ ಗಂಡನಿಗೆ ಜಗಳವಾಗಿ ಮಹಿಳೆ ಮನೆಯಿಂದ ಹೊರ ಬಂದು ತಾಯಿ ಮನೆಯಲ್ಲಿ ವಾಸವಿರುತ್ತಿದ್ದರು.ಬಳಿಕ ಮಹಿಳೆಯು ವಾರಕ್ಕೊಮ್ಮೆ ಫ್ಲಾಟ್‌ಗೆ ಹೋಗಿ ಬರುತ್ತಿದ್ದರು.ಸುಮಾರು ಒಂದು ತಿಂಗಳ ನಂತರ ಫ್ಲ್ಯಾಟ್‌ಗೆ ಹೋಗಿ ವಾಚ್‌ಮ್ಯಾನ್‌ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ತಿಳಿಸಿದರು.

ಈ ಸಂದರ್ಭ ದೂರುದಾರ ಮಹಿಳೆ ಅನುಮಾನಗೊಂಡು ಮನೆಯ ಬಂಗಾರವಿಟ್ಟ ಲಾಕರ್‌ ಕಪಾಟಿನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನವಿರಲಿಲ್ಲ.ಈ ಸಂದರ್ಭ ಗಂಡನಿಗೆ ಕರೆ ಮಾಡಿದಾಗ ‘ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ.ನಿನಗೆ ಏನು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದುಕೊಂಡಿರುವುದಾಗಿ ಹಾಗೂ ಅದಕ್ಕೆ ಬಡ್ಡಿ ಕಟ್ಟಲು ಆಗದೇ ಪ್ರಭಾಕರ್‌ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾನೆ. ಅಡವಿಟ್ಟ ಚಿನ್ನದಲ್ಲಿ ಪ್ರಭಾಕರನು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.

ಈ ಬಗ್ಗೆ ದೂರುದಾರ ಮಹಿಳೆ ಅವರು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಈ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here