ಬೆಂಗಳೂರು: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಮತ್ತಷ್ಟು ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್.ಐ ಹಾಗೂ ಸಿಟಿ ಸ್ಕ್ಯಾನ್ ವ್ಯಸ್ಥೆಯನ್ನು ಮಾಡಲಾಗುತ್ತಿದೆ. ಇದ್ಕಕಾಗಿ ನಿನ್ನೆ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಅನುದಾನಕ್ಕೂ ಒಪ್ಪಿಗೆ ಸೂಚಿಸಲಾಗಿದೆ.
ರಾಜ್ಯದ 15 ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂಆರ್ ಐ ಸ್ಕ್ಯಾನ್ ಹಾಗೂ ಐದು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇವೆಗಳನ್ನು ಖಾಸಗೀ ಸಹಭಾಗಿತ್ವದಲ್ಲಿ ಆರಂಭಿಸಲು ಗುರುವಾರ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಇದಕ್ಕಾಗಿ 47.41 ಕೋಟಿ ಅನುದಾನಕ್ಕೂ ಅಸ್ತು ಎಂದಿದೆ.
ಎಲ್ಲೆಲ್ಲಿ MRI ಸ್ಕ್ಯಾನ್.?
- ರಾಮನಗರ ಸಾರ್ವಜನಿಕ ಆಸ್ಪತ್ರೆ
- ಕೆ.ಸಿ ಜನರಲ್ ಆಸ್ಪತ್ರೆ
- ಜಮಯನಗರ ಸಾರ್ವಜನಿಕ ಆಸ್ಪತ್ರೆ, ಬೆಂಗಳೂರು
- ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ
- ಬಾಗಲಕೋಟೆ ಜಿಲ್ಲಾ ಆಸ್ಪತ್ರೆ
- ದಾವಣಗೆರೆ ಜಿಲ್ಲಾ ಆಸ್ಪತ್ರೆ
- ಧಾರವಾಡ ಜಿಲ್ಲಾ ಆಸ್ಪತ್ರೆ
- ಹಾವೇರಿ ಜಿಲ್ಲಾ ಆಸ್ಪತ್ರೆ
- ರಾಮನಗರ ಜಿಲ್ಲಾ ಆಸ್ಪತ್ರೆ
- ಯಾದಗಿರಿ ಜಿಲ್ಲಾ ಆಸ್ಪತ್ರೆ
- ಮೈಸೂರು ಜಿಲ್ಲಾ ಆಸ್ಪತ್ರೆ
- ವೆನ್ ಲಾಕ್ ಆಸ್ಪತ್ರೆ, ಮಂಗಳೂರು
- ವಿಜಯನಗರ ಜಿಲ್ಲಾ ಆಸ್ಪತ್ರೆ
- ಉಡುಪಿ ಜಿಲ್ಲಾ ಆಸ್ಪತ್ರೆ
- ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ
- ಅರಸೀಕೆರೆ ಸಾರ್ವಜನಿಕ ಆಸ್ಪತ್ರೆ
ಎಲ್ಲೆಲ್ಲಿ CT Scan ಸೆಂಟರ್ ಆರಂಭ?
- ಚಿತ್ರದುರ್ಗ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
- ಮಂಗಳೂರಿನ ವೆನ್ ಲಾಕ್ ಆಸ್ಪತ್ರೆ
- ಬೆಂಗಳೂರಿನ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ
- ಮೈಸೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ
- ಕೆ.ಸಿ ಜನರಲ್ ಆಸ್ಪತ್ರೆ, ಬೆಂಗಳೂರು