Home ತಾಜಾ ಸುದ್ದಿ ಬಹುಭಾಷಾ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ –...

ಬಹುಭಾಷಾ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ – ಏನಿದು ಪ್ರಕರಣ​?

0

ಹೈದರಾಬಾದ್: ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ.


ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.

ಇನ್ನು ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು.

LEAVE A REPLY

Please enter your comment!
Please enter your name here