Home ಕರಾವಳಿ ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು

ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು

0

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.


ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ.2022 ಜು.19 ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

LEAVE A REPLY

Please enter your comment!
Please enter your name here