Home ಕರಾವಳಿ ಬೆಳ್ತಂಗಡಿ: ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಬಲಿ

ಬೆಳ್ತಂಗಡಿ: ಹೃದಯಾಘಾತಕ್ಕೆ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಬಲಿ

0

ಮಂಗಳೂರು: ಬೆಳ್ತಂಗಡಿಯ ನೆರಿಯ ಗ್ರಾಮದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಸುಮಾ(19) ಮೃತಪಟ್ಟ ವಿದ್ಯಾರ್ಥಿನಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು.


ಆಗಸ್ಟ್ 9ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಳು. ಬಳಿಕ ಅನಾರೋಗ್ಯದ ನಿಮಿತ್ತ ಆಕೆ ಚಿಕಿತ್ಸೆ ಪಡೆದು ಮನೆಯಲ್ಲಿದ್ದಳು. ಆದರೆ ಆಗಷ್ಟ್‌ 11ರಂದು ಅನಾರೋಗ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಳು.

ಆದರೆ ನಿನ್ನೆ ಅಂದ್ರೆ ಆಗಷ್ಟ್‌ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದಾಳೆ. ಆದ್ದರಿಂದ ತಕ್ಷಣ ಸುಮಾಳನ್ನು ಮನೆಯವರು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಾಗ ಆಕೆ ದಾರಿ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಕೆಗೆ ಲೋಬಿಪಿ ಆಗಿತ್ತು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here