ನವದೆಹಲಿ: ಭಾರತ ದೇಶ ಇಂದು 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ್ದು, ಅವರ ಉದ್ದೇಶಗಳನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಛರಿಸಿದ್ದಾರೆ. “ಸ್ವಾತಂತ್ರ್ಯ ದಿನದ ಶುಭಾಶಯಗಳು. ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುತ್ತೇವೆ ಮತ್ತು ಅವರ ಉದ್ದೇಶಗಳನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ಪುನರುಚ್ಛರಿಸುತ್ತೇವೆ. ಜೈ ಹಿಂದ್!” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.