ಮಂಗಳೂರು: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದ್ದಾರೆ.ಈ ವೇಳೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.