Home ಕರಾವಳಿ ಡಾ.ಆರ್.ಕೆ.ನಾಯರ್ ಅವರಿಗೆ ಗುಜರಾತ್ ಸರಕಾರ ನೀಡುವ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ

ಡಾ.ಆರ್.ಕೆ.ನಾಯರ್ ಅವರಿಗೆ ಗುಜರಾತ್ ಸರಕಾರ ನೀಡುವ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ

0

ಸುಳ್ಯ:ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗುಜರಾತ್ ಸರಕಾರ ನೀಡುವ ಪರಿಸರ ರಾಜ್ಯ ಪ್ರಶಸ್ತಿ ಗ್ರೀನ್ ಹೀರೋ ಆಫ್ ಇಂಡಿಯಾ, ಫಾರೆಸ್ಟರ್ ಕ್ರಿಯೇಟರ್ಸ್‌ನ ಸಂಸ್ಥಾಪಕ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಅವರಿಗೆ ಪ್ರದಾನ ಮಾಡಲಾಯಿತು ಆಗಸ್ಟ್ 15ರಂದು ವಲ್ಸಾಡ್ ಜಿಲ್ಲೆಯಲ್ಲಿ ನಡೆದ ಸಮಾರಂಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪ್ರಶಸ್ತಿ ಪ್ರದಾನ ಮಾಡಿದರು.


ಗುಜರಾತ್ ರಾಜ್ಯಪಾಲರು, ಸಚಿವರುಗಳು ಉಪಸ್ಥಿತರಿದ್ದರು. ಸುಳ್ಯ ಜಾಲ್ಸೂರಿನವರಾದ ಡಾ. ಆರ್.ಕೆ.ನಾಯರ್(ರಾಧಾಕೃಷ್ಣನ್ ನಾಯರ್) ಮಿಯಾವಾಕಿ ಮಾದರಿಯಲ್ಲಿ ಅರಣ್ಯ ಬೆಳೆಸಿ ಲಕ್ಷಾಂತರ ಗಿಡಗಳನ್ನು ಬೆಳೆಸುವ ಮೂಲಕ ಪ್ರಸಿದ್ದಿ ಪಡೆದಿದ್ದಾರೆ. ಗುಜರಾತ್‌ನಲ್ಲಿ ಉದ್ಯಮಿಯಾಗಿರುವ ಡಾ.ನಾಯರ್ ಈಗ ಪರಿಸರ ಸಂರಕ್ಷಣೆ ಹಾಗೂ ಪರಿಸರ ಬೆಳೆಸುವುದರಲ್ಲಿ ಸಕ್ರೀಯರಾಗಿದ್ದಾರೆ. ನೂರಕ್ಕೂ ಹೆಚ್ಚು ಹೊಸ ಅರಣ್ಯಗಳನ್ನು ಸೃಷ್ಠಿಸಿರುವ ಅವರು ಸುಮಾರು 20 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿದ್ದಾರೆ.‌ಒಂದು ಕೋಟಿ ಗಿಡ ಬೆಳೆಸುವ ಗುರಿ ಹೊಂದಿದ್ದಾರೆ. ಇವರ ಈ ಪರಿಸರ ಸೇವೆಯನ್ನು ಪರಿಗಣಿಸಿ ಗುಜರಾತ್ ಸರಕಾರ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ.

LEAVE A REPLY

Please enter your comment!
Please enter your name here