ಬೆಂಗಳೂರು: ಮುಂದಿನ ದಿನಗಳಲ್ಲಿ ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲು ಮುಂದಾಗಿದ್ದು, ಈ ಬಗ್ಗೆ ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.
ಈ ಬಗ್ಗೆ ಶುಕ್ರವಾರ ನಡೆದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವ ಮಾಡಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚಿಸಿದ್ದಾರೆ.
ಈ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಸತಿ ಯೋಜನೆಗಳಲ್ಲಿ ಫಲಾನುಭವಿಗಳು ವಂತಿಗೆ ಪಾವತಿಸದೆ ಅನುಷ್ಠಾನ ಕಷ್ಟವಾಗುತ್ತಿದೆ. ಹೀಗಾಗಿ ವಾರ್ಷಿಕ ಮೂರು ಲಕ್ಷ ಮನೆ ನಿರ್ಮಾಣ ಬದಲು ಒಂದೂವರೆ ಲಕ್ಷ ಮನೆ ನಿರ್ಮಾಣದ ಗುರಿ ಹಾಕಿಕೊಂಡು ಪೂರ್ಣಗೊಳಿಸಿದ್ದರೆ ಯೋಜನೆ ಪೂರ್ಣಗೊಳ್ಳಳಿದೆ ಹೀಗಾಗಿ ಈ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸೋಣ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನೂ ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಇದು ಅನ್ವಯ ಆಗದು. ಫಲಾನುಭವಿಗಳ ವಂತಿಗೆ ಪಾವತಿಸಲೇಬೇಕಾಗುತ್ತದೆ ಎಂದು ತಿಳಿಸಿದ್ದು, ಮರು ನಿರ್ಮಾಣ ಮಾಡಬೇಕಾದರೆ, ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಕೊಡಲು ಒಪ್ಪಿದರೆ ಮಾತ್ರ ಲಾಭವನ್ನು ಪಡೆದುಕೊಳ್ಳಲಿದ್ದಾರೆ ಅಂತ ತಿಳಿಸಿದರು.