ಮಂಗಳೂರು: ಆಟೊ ರಿಕ್ಷಾ ಪಲ್ಟಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ನಂತೂರು ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ನಳಿನಿ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತ ನಳಿನಿ ನಂತೂರಿನಿಂದ ಶಿವಭಾಗ್‌ಗೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ನಂತೂರು ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನಳಿನಿಯವರ ತಲೆಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿರುವುದಾಗಿ ಬಗ್ಗೆ ವೈದ್ಯರು ಘೋಷಿಸಿದ್ದಾರೆ.