Home ಕರಾವಳಿ ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳು ಪೊಲೀಸ್ ಬಲೆಗೆ

0

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ‌ನಗರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಾಳೆಪುಣಿಯ ಮುಡಿಪು ಚರ್ಚ್ ಬಳಿಯ ನಿವಾಸಿ ಮೊಹಮ್ಮದ್ ರಫೀಕ್ ಯಾನೆ ಮುಡಿಪು ರಫೀಕ್, ಮಂಗಳೂರಿನ ಮನ್ನೂರು ಗ್ರಾಮದ ಮದನಿನಗರದ ಅಬ್ದುಲ್ ರಾಝೀಕ್ ಬಂಧಿತರು. ಮೊಹಮ್ಮದ್ ರಫೀಕ್ ಯಾನೆ ಮುಡಿಪು ರಫೀಕ್ ನನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಕೇರಳದ ತಲಶ್ಶೇರಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈತನನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನ ಮುನ್ನೂರು ಗ್ರಾಮದ ಮದನಿನಗರದ ಅಬ್ದುಲ್ ರಾಝೀಕ್ ಎನ್ ಡಿಪಿಎಸ್ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.


LEAVE A REPLY

Please enter your comment!
Please enter your name here