Home ಕರಾವಳಿ ಮಂಗಳೂರು:ಆಸ್ಪತ್ರೆಯಿಂದ ತಪ್ಪಿಸಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್..!

ಮಂಗಳೂರು:ಆಸ್ಪತ್ರೆಯಿಂದ ತಪ್ಪಿಸಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್..!

0

ಮಂಗಳೂರು : ವೆನ್ಲಾಕ್ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿದ್ದ ವೇಳೆ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಜೀವನಡು ನಿವಾಸಿ ಎಸ್.ಎಮ್ ನೌಫಾಲ್(32) ಬಂಧಿತ ಆರೋಪಿ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎನ್‌ಡಿಪಿಎಸ್ ಪುಕರಣಕ್ಕೆ ಸಂಬಂಧಿಸಿದಂತೆ ಎಸ್.ಎಮ್ ನೌಫಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದನು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಈತನನ್ನು ಪೊಲೀಸ್ ಭದ್ರತೆಯಲ್ಲಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನೌಫಾಲ್ ಆಗಸ್ಟ್ 16ರಂದು 5.06ಕ್ಕೆ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಆರೋಪಿಯ ಗಾರ್ಡ್ ಕರ್ತವ್ಯದಲ್ಲಿದ್ದ ಸಚಿನ್ ಕೆ.ಎಸ್ ನೀಡಿದ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್‌ ಹಾಗೂ ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.


LEAVE A REPLY

Please enter your comment!
Please enter your name here