Home ಕರಾವಳಿ ಬಜಪೆ: ವೈಯಕ್ತಿಕ ವಿಚಾರಕ್ಕೆ ಇಬ್ಬರು ವ್ಯಕ್ತಿಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಬಜಪೆ: ವೈಯಕ್ತಿಕ ವಿಚಾರಕ್ಕೆ ಇಬ್ಬರು ವ್ಯಕ್ತಿಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

0

ಮಂಗಳೂರು: ವೈಯಕ್ತಿಕ ವಿಚಾರಕ್ಕೆ ಪರಸ್ಪರ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರದಂದು(ಆ.21) ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ಶಿವಪ್ರಸಾದ್ ಹಾಗು ಷಡ್ರಕ್ ಇಮ್ಯಾನುವಲ್ ಅಲಿಯಾಸ್ ಮನು ಎಂಬುವರ ನಡುವೆ ವೈಯಕ್ತಿಕ ವಿಚಾರಕ್ಕೆ ಬೆಳಗ್ಗೆ ಜಗಳ ನಡೆದಿದೆ.


ಈ ಸಂದರ್ಭದಲ್ಲಿ ಸಾರ್ವಜನಿಕರು ಜಗಳ ಬಿಡಿಸಲು ಮುಂದಾದರೂ ಪ್ರಯೋಜನವಾಗಲಿಲ್ಲ. ಇಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಸಾರ್ವಜನಿಕರಿಗೂ ಕಿರಿಕಿರಿ ಮಾಡಿದ್ದಾರೆ. ಅಲ್ಲದೇ ಹೊಡೆದಾಡಿಕೊಂಡಿದ್ದಾರೆ. ಹೀಗಾಗಿ ತಕ್ಷಣ ಬಜಪೆ ಪೊಲೀಸರಿಗೆ ಸಾರ್ವಜನಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಗಳ ಬಿಡಿಸಿ, ಪ್ರಕರಣ ದಾಖಲಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here