ಬೆಳ್ತಂಗಡಿ : ಅಕ್ರಮವಾಗಿ ಕಡವೆಯನ್ನು ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿದ್ದರು. ಅರಣ್ಯ ಇಲಾಖೆಯ ಸಿಬಂದಿ ರಾತ್ರಿ ಗಸ್ತು ತಿರುಗುವಾಗ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುದೇಶ್ ಪಟ್ರಮೆ, ಪುನೀತ್, ಕೋಟ್ಯಪ್ಪ ಗೌಡ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿ ಲೋಕೇಶ್ ತಲೆಮರೆಸಿಕೊಂಡಿದ್ದಾನೆ.