ಪುತ್ತೂರು:ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ. ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.