ಉಡುಪಿ: ತಮ್ಮ ಕೈಗಳಲ್ಲಿ ಸೌಟು ಪೊರಕೆ ಹಿಡಿಯುವ ತಾಯಂದಿರು ಕತ್ತಿ ಮತ್ತು ತಲವಾರುಗಳನ್ನು ಹಿಡಿಯಿರಿ, ಈ ಮೂಲಕ ನಿಮ್ಮ ರಕ್ಷಣೆ ಮಾಡಿಕೊಳ್ಳಿ ಎಂದು ತಾಯಂದಿರಿಗೆ ಕರೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಗೆ ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಮಂಜುರಾಗಿದೆ. ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಶರಣ್ ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡಿದ್ದ.ಶರಣ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.