Home ಕರಾವಳಿ ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ- ಪ್ರಕರಣ ದಾಖಲು

ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ- ಪ್ರಕರಣ ದಾಖಲು

0

ಮಂಗಳೂರು: ಮಂಗಳೂರು ಹೊರವಲಯದ ಅಡ್ಯಾರ್ ಬಳಿಯ ಫ್ಲಾಟ್ ನಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಯ ಮೇಲೆ ಸ್ವಧರ್ಮೀಯ ಯುವಕರಿಂದಲೇ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ.


ಮಂಗಳೂರಿನ ಬಲ್ಮಠ ಬಳಿಯ ಖಾಸಗಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ನಗರದ ಅಲೋಶಿಯಸ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಹುಡುಗಿ ವಿಚಾರಕ್ಕೆ ಮುಸ್ಲಿಂ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಗಾಂಜಾ ನಶೆಯಲ್ಲಿದ್ದ ಅನಾನ್ ಮತ್ತು ತಬೀಶ್ ಹಾಗೂ ತಂಡದಿಂದ ಯುವಕನ ಮೇಲೆ ದಾಳಿ ನಡೆದಿದ್ದು, ವಿದ್ಯಾರ್ಥಿಯನ್ನು ಖಾಸಗಿ ಫ್ಲಾಟ್ ನಲ್ಲಿ ಕೂಡಿ ಹಾಕಿ ಮನ ಬಂದಂತೆ ಥಳಿಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದ ಇಬ್ರಾಹಿಂ ಫಾಹಿಂ(18) ಎಂದು ತಿಳಿದುಬಂದಿದೆ. ಸದ್ಯ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಫಾಹಿಂಗೆ ಚಿಕಿತ್ಸೆ ಪಡೆಯುತ್ತಿದ್ದಾನೆ. ಎಸ್ಡಿಪಿಐ ಮುಖಂಡ ಅನ್ವರ್ ಸಾದತ್ ಪುತ್ರನ ನೇತೃತ್ವ ದಲ್ಲಿ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಬಂದರು ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.  

LEAVE A REPLY

Please enter your comment!
Please enter your name here