Home ಕರಾವಳಿ ಬಂಟ್ವಾಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು‌

ಬಂಟ್ವಾಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು‌

0

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ.


ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1,23,000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು. ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ, ಶ್ವಾನದಳ, ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here