Home ಕರಾವಳಿ ಉಳ್ಳಾಲ : ಕೊಳದಲ್ಲಿ ಮುಳುಗಿ ಯುವಕ ಮೃತ್ಯು..!

ಉಳ್ಳಾಲ : ಕೊಳದಲ್ಲಿ ಮುಳುಗಿ ಯುವಕ ಮೃತ್ಯು..!

0

ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ(36) ಮೃತರು. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್‌ ವೃತ್ತಿ ನಡೆಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.


LEAVE A REPLY

Please enter your comment!
Please enter your name here