ಮಂಗಳೂರು: ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ನರಿಂಗಾನ ನಿವಾಸಿ ನಮೀರ್ ಹಂಝ ಅಲಿಯಾಸ್ ಸಮೀರ್ ಹಂಝ (39) ಬಂಧಿತ ಆರೋಪಿ. ಆಗಸ್ಟ್ 12ರಂದು ಕೊಣಾಜೆಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡಿದ್ದ. ಈ ವೇಳೆ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆತ್ನಿಸಿದ್ದಾನೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಕೃತ್ಯ ನಡೆಸಿದ ಬಳಿಕ ನಮೀರ್ ಹಂಸ ತಲೆಮರೆಸಿಕೊಂಡಿದ್ದನು. ಆತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆಗಸ್ಟ್ 29 ರಂದು ಆರೋಪಿಯನ್ನು ಬಂಧಿಸಿದ್ದಾರೆ.