ಮಂಗಳೂರು:ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯ ಅಂಗವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಶ್ರೀ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಹಿಂದೂ ಸಮಾಜದ ಸಂತ, ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ಜನ್ಮದಿನದಂದು ಈ ಅನುಗ್ರಹವನ್ನು ಪಡೆಯುವ ಅವಕಾಶ ದೊರಕಿರುವುದು ನನ್ನ ಸೌಭಾಗ್ಯ. ನನ್ನ ಜೀವನದ ಈ ಹೊಸ ವರ್ಷವು ಸಮಾಜ ಹಾಗೂ ರಾಷ್ಟ್ರದ ಕೆಲಸ ಮಾಡಲು ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯಲು ಅವಕಾಶಗಳನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.