ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ರೋಗ ಹರಡದಂತೆ ವಹಿಸಲಾಗುತ್ತಿರುವ ನಿಗಾ ಮುಂದುವರಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರ ಜಿಲ್ಲೆಗೆ ಹಬ್ಬದಂತೆ ತಡೆಗಟ್ಟಲು ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಗಡಿಭಾಗದ ಚೆಕ್‌ಪೋಸ್ಟ್‌ಗಳಾದ ತಲಪಾಡಿ, ಜಾಲೂರು, ಸಾರಡ್ಕದಲ್ಲಿ ವಿಶೇಷ ನಿಗಾ ಇರಿಸಲಾಗಿದೆ.
ಹಂದಿ ಮಾಂಸ ಕೊಂಡೊಯ್ದು ಕೇರಳ ಭಾಗಕ್ಕೆ ತೆರಳಿ ಬರುವ ವಾಹನಗಳ ಮೇಲೆ ಚೆಕ್‌ಪೋಸ್ಟ್‌ಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಹಂದಿ ಹಾಗೂ ಹಂದಿ ಮಾಂಸಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲಾಗಿದೆ. ಇಲಾಖಾ ಪಶುವೈದ್ಯಾ ಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಎಲ್ಲ ಹಂದಿ ಫಾರಂಗಳಿಗೆ ಭೇಟಿ ನೀಡಿ ಹಂದಿ ಸಾಕಾಣಿಕೆದಾರರಿಗೆ ಸಲಹೆ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.