ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಂಗಳೂರು ನಿವಾಸಿಯನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ
ಮಂಗಳೂರು ಗೋರಿಗುಡ್ಡೆ ಲೋಬೊ ಕಂಪೌಂಡ್ ನ ಬಾಲಕೃಷ್ಣ (50) ಬಂಧಿತ ಆರೋಪಿ.
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಡೆದು ಪರಿಶೀಲಿಸಿದಾಗ ಬಾಕ್ಸ್ ಗಳಲ್ಲಿ ತುಂಬಿಸಿ ಸುಮಾರು 4500 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಕುಂಬಳೆ ಕಡೆಗೆ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.