![](https://i0.wp.com/prakharanews.com/wp-content/uploads/2025/01/WhatsApp-Image-2025-01-21-at-12.33.45-PM-scaled.jpeg?fit=2048%2C2560&ssl=1)
ಚೆನ್ನೈ: ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಇದ್ದಂತೆ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿದ್ದಾರೆ.
![](https://i0.wp.com/prakharanews.com/wp-content/uploads/2025/01/WhatsApp-Image-2025-01-22-at-5.17.51-PM.jpeg?fit=1157%2C1600&ssl=1)
![](https://i0.wp.com/prakharanews.com/wp-content/uploads/2025/01/WhatsApp-Image-2025-01-23-at-5.27.18-PM.jpeg?fit=681%2C706&ssl=1)
![](https://i0.wp.com/prakharanews.com/wp-content/uploads/2025/01/girija-1.jpg?fit=1158%2C1756&ssl=1)
ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿರುವ ಅವರು, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲ ವಿಷಯಗಳನ್ನು ವಿರೋಧಿಸಲು ಆಗುವುದಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಿದರೆ ಮಾತ್ರ ಅದು ನಾಶವಾಗಬಹುದು ಎಂದರು.
![](https://i0.wp.com/prakharanews.com/wp-content/uploads/2025/01/IMG-20241214-WA0021-scaled.jpg?fit=1810%2C2560&ssl=1)
ಇನ್ನು ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದಿದ್ದಾರೆ.
ಸನಾತನವನ್ನು ವಿರೋಧಿಸುವುದಕ್ಕಿಂತ, ಅದನ್ನು ನಾವು ನಿರ್ಮೂಲನೆ ಮಾಡಬೇಕು. ಸನಾತನ ಎನ್ನುವ ಪದ ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.