ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಹಣಕ್ಕೆ ಬೇಡಿಕೆ ಇಟ್ಟಂತ ಆನ್ ಲೈನ್ ವಂಚಕನ ವಿರುದ್ಧ ಇದೀಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಬಳಸಿಕೊಂಡು, ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿತ್ತು.
ಆ ಖಾತೆಯಿಂದಲೇ ಹಲವರಿಗೆ ಹಣಕ್ಕೂ ಬೇಡಿಕೆ ಇಡಲಾಗಿತ್ತು ಎನ್ನಲಾಗಿದೆ.
ಈ ವಿಷಯ ಗಮನಕ್ಕೆ ಬರುತ್ತಿದ್ದಂತೇ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಂತ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.
ಇದೀಗ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿರುವಂತ ದೂರಿನ ಹಿನ್ನಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು, ನಕಲಿ ಫೇಸ್ ಬುಕ್ ಖಾತೆ ತೆರೆದಂತ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೇ ನಕಲಿ ಫೇಸ್ ಬುಕ್ ಖಾತೆ ತೆರೆದ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಅಂದಹಾಗೇ ಇತ್ತೀಚಿಗೆ ಪ್ರಸಿದ್ಧ ವ್ಯಕ್ತಿಗಳು, ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರೋರ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆ ತೆರೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದೇ ಮಾದರಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿಯೂ ನಕಲಿ ಖಾತೆ ತೆರೆದು, ವಂಚನೆಗೆ ತೊಡಗಿದ್ದಂತ ಆರೋಪಿಗಳ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ.