Home ಕರಾವಳಿ ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ವೈದ್ಯ ಸಾವು

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ವೈದ್ಯ ಸಾವು

0

ಉಳ್ಳಾಲ: ಸಹಪಾಠಿಗಳೊಂದಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯನೋರ್ವ ರುದ್ರ ಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರದಲ್ಲಿ ನಿನ್ನೆ ತಡರಾತ್ರಿ 11 ಗಂಟೆಗೆ ಸಂಭವಿಸಿದ್ದು ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಮೃತ ವೈದ್ಯನನ್ನು ನಗರದ ಎ.ಜೆ ಆಸ್ಪತ್ರೆಯ ಸರ್ಜನ್ ರಾಮನಗರ ನಿವಾಸಿ ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್ ಮೂವರು ಇಂಟನ್೯ಶಿಪ್ ನಡೆಸುತ್ತಿರುವ ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಅಲ್ಲೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.


LEAVE A REPLY

Please enter your comment!
Please enter your name here