ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್ ನಟಿ ರಮ್ಯಾ ಇನ್ನಿಲ್ಲ ಎನ್ನುವ ಸುದ್ದಿಯೊಂದು ವೈರಲ್ ಆಗಿದ್ದು, ಇದು ಕೆಲ ನಿಮಿಷಗಳ ಕಾಲ ದೊಡ್ಡ ಆಘಾತವನ್ನೇ ಉಂಟು ಮಾಡಿತ್ತು. ಈ ತಮಿಳಿನಲ್ಲಿ ರಮ್ಯಾ ಹೆಸರಿನ ಸಣ್ಣ ನಟಿಯೊಬ್ಬರು ನಿಧನರಾಗಿದ್ದು, ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಮೋಹಕತಾರೆ ರಮ್ಯಾ ನಿಧರಾಗಿದ್ದಾರೆ ಅಂತ ಕೆಲ ಮಾಧ್ಯಮಗಳು ಕೂಡ ವರದಿ ಮಾಡಿದ್ದವು, ಇದಲ್ಲದೇ ಎಸ್‌ಎಸ್ ಮ್ಯೂಸಿಕ್, ದಿನಕರನ್ ಹಾಗೂ ಕೆಲವೊಂದು ಅಧಿಕೃತ ಟ್ವಿಟರ್ ಪೇಜ್‌ಗಳು ಕೂಡ ನಟಿ ರಮ್ಯಾ ಅವರ ಚಿತ್ರಗಳನ್ನು ಪೋಸ್ಟ್ ಮಾಡಿ ಕಾರ್ಡಿಯಾಕ್ ಅರೆಸ್ಟ್‌ನಿಂದ ನಿಧನರಾಗಿದ್ದಾರೆ ಎಂದು ಪೋಸ್ಟ್ ಕಂಬನಿ ಮಿಡಿದಿದೆ.
ಈ ನಡುವೆ ಚಿತ್ರಾ ಸುಬ್ರಮಣ್ಯಂ ಎನ್ನುವವರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ರಮ್ಯಾ ಇನ್ನಿಲ್ಲ ಎನ್ನುವುದು ಸುಳ್ಳು ಸುದ್ದಿಯಾಗಿದೆ ಅಂತ ಹೇಳಿದ್ದಾರೆ.