Home ತಾಜಾ ಸುದ್ದಿ ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್- ಇಬ್ಬರು ಗಂಭೀರ

ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್- ಇಬ್ಬರು ಗಂಭೀರ

0

ಮೂಡಿಗೆರೆ: ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಸಂಭವಿಸಿದೆ.

ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲವು ಮಂದಿ ರಸ್ತೆ ಬದಿ ಕಾಯುತ್ತಿದ್ದರು ಈ ವೇಳೆ ಅತೀ ವೇಗವಾಗಿ ಬಂದ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿತ್ತ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡು ಐವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ,

ಅತಿವೇಗವಾಗಿ ಬರುತ್ತಿದ್ದ ಬಸ್ಸು ನಿಯಂತ್ರಣ ಕಳೆದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ, ಡಿಕ್ಕಿ ರಬಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂಗೊಂಡಿದೆ.

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here