ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಅಧಿಕಾರ ಸ್ವೀಕರಿಸಿ ಅನುಪಮ್ ಅಗರ್ವಾಲ್ ಮಾತನಾಡಿ, ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುವ ಭರವಸೆಯನ್ನು ನೀಡುವುದಾಗಿ ಅವರು ತಿಳಿಸಿದರು.