
ಚೆನ್ನೈ: ಹಣಕಾಸು ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಮಹಾಲಕ್ಷ್ಮೀ ಪತಿ, ತಮಿಳು ಚಲನಚಿತ್ರ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ರನ್ನು ಪೊಲೀಸರು ಬಂಧಿಸಿದ್ದಾರೆ.



ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಉತ್ತಮ ಲಾಭ ಸಿಗುತ್ತದೆ ಎಂದು ಹೇಳಿ ನಕಲಿ ದಾಖಲೆಗಳನ್ನು ಸಿದ್ಧಪಡಿಸಿ 16 ಕೋಟಿ ರೂ.ವರೆಗೆ ವಂಚಿಸಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಚೆನ್ನೈನ ಬಾಲಾಜಿ ನೀಡಿದ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ರವೀಂದರ್ ಚಂದ್ರಶೇಖರನ್ ಅವರು ಲಿಬ್ರಾ ಪ್ರೊಡಕ್ಷನ್ಸ್ ಹೆಸರಿನಲ್ಲಿ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ರವೀಂದರ್ ಚಂದ್ರಶೇಖರ್ ಅವರು ಮಹಾಲಕ್ಷ್ಮೀ ಅವರ ಜೊತೆ ಮದುವೆ ಮಾಡಿಕೊಂಡ ನಂತರ ಸೋಶಿಯಲ್ ಮೀಡಿಯಾದಲ್ಲಿ ಬಹಳ ಫೇಮಸ್ ಆಗಿದ್ದರು. ನಂತರ ಈ ಪ್ರಕರಣದಲ್ಲಿ ರವೀಂದರ್ ಚಂದ್ರಶೇಖರನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
