ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಮಾನಸಿಕ ಸಮಸ್ಯೆಯ ಯುವತಿಯ ವಿಡಿಯೋವೊಂದು ವೈರಲ್ ಆಗಿದೆ. ಮಂಗಳೂರಿನ ಕದ್ರಿ ಠಾಣೆಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸುವ ವಿಡಿಯೋ ವೈರಲ್ ಆಗಿದೆ.
ಯುವತಿಯೊಬ್ಬಳನ್ನ ನಾಲ್ಕೈದು ಮಹಿಳಾ ಪೊಲೀಸ್ ಸಿಬ್ಬಂದಿ ನಿಯಂತ್ರಿಸುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿಗೆ ತುಳಿದು ಹಲ್ಲೆಗೆ ಯತ್ನಿಸಿದ್ದಾರೆ.ಈ ವೇಳೆ ಯುವತಿ ನಿಯಂತ್ರಿಸಲು ಪೊಲೀಸರು ಕೈ ಗೆ ಕೋಳ ತೊಡಿಸಲು ಮುಂದಾಗಿದ್ದಾರೆ. ಘಟನೆ ಬಳಿಕ ವೈರಲ್ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಪಷ್ಟನೆ ನೀಡಿದ್ದು, ಸೆ.1 ರ ಬೆಳಿಗ್ಗೆ 06.50ಕ್ಕೆ ಪಂಪವೆಲ್ ಗಣೇಶ್ ಮೆಡಿಕಲ್ ನಲ್ಲಿ ಈ ಯುವತಿ ಸಿಕ್ಕಿದ್ದಾಳೆ.ಅಸಾಮಾನ್ಯವಾಗಿ ಹಾಗೂ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸಿದ್ದಾಳೆ. ಇದನ್ನು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಗಮನಿಸಿ ಮಾದಕ ದ್ರವ್ಯ ಸೇವನೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಹಲ್ಲೆಗೆ ಯತ್ನಿಸಿದ್ದಾಳೆ. ಬಳಿಕ ಕದ್ರಿ ಪೊಲಿಸರ ಸಹಾಯದಿಂದ ಠಾಣೆಗೆ ಅಬಕಾರಿ ಅಧಿಕಾರಿ ಕರೆ ತಂದಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ. ಬಳಿಕ ಮಹಿಳಾ ಸಿಬ್ಬಂದಿ ಬಲದೊಂದಿಗೆ ಯುವತಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಆದರೆ ವೈದ್ಯಕೀಯ ತಪಾಸಣೆಯಲ್ಲಿ ಮಾದಕ ದ್ರವ್ಯ ಪರೀಕ್ಷೆ ನೆಗೆಟಿವ್ ಬಂದಿದೆ. ನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ . ಆಕೆ ಮಾನಸಿಕ ಸಮಸ್ಯೆಯಿಂದ ಯುವತಿ ಬಳಲುತ್ತಿರೋ ಬಗ್ಗೆ ಮಾಹಿತಿ ದೊರಕಿದೆ ಎಂದು ತಿಳಿಸಿದ್ದಾರೆ.