ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸರಿಯಾದ ಮಾಹಿತಿ ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಸಲ್ಲಿಸದ ಕಾರಣ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಹೈಕೋರ್ಟ್ ಗೆ ಮೇಲ್ಮನವಿಯನ್ನು ಅವರು ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸುವ ಮೂಲಕ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.
ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನದಿಂದ ಆಯ್ಕೆಯನ್ನು ಚುನಾವಣೆ ವೇಳೆಯಲ್ಲಿ ಸರಿಯಾದ ಮಾಹಿತಿ ಸಲ್ಲಿಸದ ಕಾರಣ ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೇ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸೋವರೆಗೆ ಮಧ್ಯಂತರ ತಡೆ ನೀಡುವಂತೆ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿಯಲ್ಲಿ ಕೋರಲಾಗಿತ್ತು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸೋವರೆಗೆ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂಬುದಾಗಿ ಹೇಳುವ ಮೂಲಕ, ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಸಂಸದ ಸ್ಥಾನ ಆಯ್ಕೆ ಅಸಿಂಧು ತಡೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.