ಮಂಗಳೂರು : ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.
ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.