ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಆರೋಪಿ ಚೈತ್ರಾ ಕುಂದಾಪುರ, ಸಿಸಿಬಿ ಕಚೇರಿಯಲ್ಲೇ ಕುಸಿದು ಬಿದ್ದಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಎರಡು ದಿನಗಳ ಹಿಂದೆ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಅನ್ನು ವಿಧಾನಸಭಾ ಚುನಾವಣೆಯಲ್ಲಿ ಕೊಡಿಸೋದಾಗಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.
ಸಿಸಿಬಿ ಕಚೇರಿಯಲ್ಲಿ ನಿನ್ನೆ ಇಡೀ ದಿನ ಚೈತ್ರಾ ಕುಂದಾಪುರ ವಿಚಾರಣೆ ನಡೆಸಲಾಗಿತ್ತು. ಇಂದು ಕೂಡ ವಿಚಾರಣೆ ಮುಂದುವರೆಸೋ ಸಾಧ್ಯತೆ ಇತ್ತು. ಈ ನಡುವೆ ಅನಾರೋಗ್ಯದಿಂದ ಸಿಸಿಬಿ ಕಚೇರಿಯಲ್ಲೇ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ಸಿಸಿಬಿ ಪೊಲೀಸರು ಈಗ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ತೈತ್ರಾಗಿ ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗುತ್ತಿದೆ. ವೈದ್ಯರ ತಪಾಸಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.