ಚೆನ್ನೈ:ಖ್ಯಾತ ತಮಿಳು ನಟ ವಿಜಯ್ ಆಂಟನಿ ಮಗಳು ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಅವರು ಸೆಪ್ಟೆಂಬರ್ 19 ರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು.
ವರದಿಗಳ ಪ್ರಕಾರ, ಮೀರಾ ಅವರ ಚೆನ್ನೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ವರದಿಗಳ ಪ್ರಕಾರ, ಅವರು ಒತ್ತಡದಲ್ಲಿದ್ದರು ಮತ್ತು ಅದಕ್ಕಾಗಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಚೆನ್ನೈನ ಜನಪ್ರಿಯ ಶಾಲೆಯಲ್ಲಿ ಓದುತ್ತಿದ್ದಳು. ದೃಢೀಕರಿಸದ ವರದಿಗಳ ಪ್ರಕಾರ ಬಾಲಕಿ ಖಿನ್ನತೆಯಿಂದ ಬಳಲುತ್ತಿದ್ದಳು.
ಮನೆಯ ಸಹಾಯಕರು ಕೋಣೆಯಲ್ಲಿದ್ದ ಮೀರಾ ಅವರನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಿದರು. ಆದರೆ, ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ವಿಜಯ್ ಆಂಟೋನಿ ತಮಿಳಿನ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿಚ್ಚಕಾರನ್ ಅವರಿಗೆ ಬಹಳ ಹೆಸರು ತಂದುಕೊಟ್ಟಿದೆ.