ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ.ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.
ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.