ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಸೆ.23ರ ಶನಿವಾರದಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉತ್ಸುವರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್,ಮಾಜಿ ಸಚಿವ ಅಭಯಚಂದ್ರ ಜೈನ,ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು,ಜಿಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತಿತರ ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸದಾಶಿವ ದೇವಾಡಿಗ ಮತ್ತು ಚಂದ್ರಶೇಖರ್ ಬಾಯರಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.