ಮಂಗಳೂರು : ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭ ಸಚಿವರು ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಿದ್ದು, ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ. ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ಸೂಚಿಸಿದ್ದಾರೆ.