ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ
ಘಟನೆ ಸೋಣಂದೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಸೋಣಂದೂರು ಮುಂಡಾಡಿ ಮನೆ ನಿವಾಸಿ ಪ್ರಶಾಂತ್ ಮೃತ ಯುವಕ. ಅವರು ಸೆ 18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.