ಕಾಸರಗೋಡು: ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ನಾಲ್ವರು ಮಹಿಳೆಯರು ಒಂದೇ ಕುಟುಂಬದವಾರಾಗಿದ್ದು, ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿ ಆಟೋ ಚಾಲಕ ಅಬ್ದುಲ್ ರೌಫ್ (48), ಉಸ್ಮಾನ್ ರವರ ಪತ್ನಿ ಬೀಫಾತಿಮ್ಮ (50), ಬೀಫಾತಿಮ್ಮ ( 60), ಇಸ್ಮಾಯಿಲ್ ರವರ ಪತ್ನಿ ಉಮ್ಮು ಫಲಿಮಾ, ಬೆಳ್ಳೂರಿನ ಅಬ್ಬಾಸ್ ರವರ ಪತ್ನಿ ನಫೀಸಾ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ರೌಫ್ ಕಾಸರಗೋಡಿನ ಆಸ್ಪತ್ರೆಯಲ್ಲಿ ಮೃತಪಟ್ಟರು. ಪೆರ್ಲ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಖಾಸಗಿ ಶಾಲಾ ಬಸ್ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಬದಿಯಡ್ಕ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.