ಬೆಂಗಳೂರು : ಕಾವೇರಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಕಿವಿಗೆ ಹೂ ಹಾಗೂ ಹತ್ತಿ ಇಟ್ಟುಕೊಂಡು ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ.
ಇನ್ನೂ, ಪ್ರೀಡಂ ಪಾರ್ಕ್ ನಲ್ಲಿ ಓರ್ವ ರೈತ ಟವಲ್ನಿಂದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೂಡಲೇ ಪೊಲೀಸರು ರೈತನನ್ನು ತಡೆದಿದ್ದಾರೆ. ನಗರದ ಹಲವು ಕಡೆ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿವೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು, ರಾಜಕೀಯ ಗುಂಪುಗಳು ಮತ್ತು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ವಾಹನ ಸಂಚಾರ ಬಂದ್ ಆಗಿದೆ.